ಬೆಂಗಳೂರು: ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು 20 ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇ ಳಿದರು. ಬೆಂಗಳೂರಿನಲ್ಲಿ ಶನಿವಾರ ಅವರು ಶೇಷಾದ್ರಿಪುರಂ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ಈ ತಿಂಗಳ 30ಕ್ಕೆ ಪರೀಕ್ಷೆ ಮುಗಿಯುತ್ತದೆ. ಹೀಗಾಗಿ ಕ್ಷಿಪ್ರಗತಿಯಲ್ಲಿ ಫಲಿತಾಂಶ ನೀಡಲು ಕ್ರಮ ವಹಿಸಲಾಗಿದೆ. 20 ದಿನಗಳಲ್ಲಿ ರಿಸಲ್ಟ್ ಪ್ರಕಟಿಸಲಾಗುವುದು, ತದ ನಂತರ ಅಕ್ಟೋಬರ್ ನಲ್ಲಿ ಕೌನ್ಸಿಲಿಂಗ್