ಕರ್ನಾಟಕದ ಪ್ರಸಿದ್ಧ ನಾಗಕ್ಷೇತ್ರ, ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಚಂಪಾ ಷಷ್ಠಿ ಪ್ರಯುಕ್ತ ಕ್ಷೇತ್ರದ ದೇವರಾ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಡಗರ, ಸಂಭ್ರಮದಿಂದ ನಡೆಯಿತು. ರಥಾರೂಢರಾದ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಕೊವಿಡ್ ನಿರ್ಬಂಧಗಳ