ಮೈಸೂರು: ಇಂದಿನಿಂದ ರಾಜ್ಯದಲ್ಲಿ ಎಲ್ಲವೂ ಮುಕ್ತ.. ಮುಕ್ತ.. ಅನ್ ಲಾಕ್ 3.0 ರಲ್ಲಿ ರಾಜ್ಯ ಸರ್ಕಾರ ದೇವಾಲಯಗಳನ್ನು ಸಂಪೂರ್ಣವಾಗಿ ತೆರೆಯಲು ಅವಕಾಶ ಮಾಡಿಕೊಟ್ಟಿದೆ. ಅದರಂತೆ ನಾಡದೇವತೆ ಚಾಮುಂಡೇಶ್ವರಿ ದೇವಾಲಯ ಇಂದಿನಿಂದ ಭಕ್ತರಿಗೆ ಸಂಪೂರ್ಣವಾಗಿ ತೆರೆದುಕೊಂಡಿದೆ. ಈ ಹಿನ್ನಲೆಯಲ್ಲಿ ಮೊದಲ ದಿನವೇ ಭಕ್ತರ ಸಾಲು ಕಂಡುಬಂದಿದೆ.ಚಾಮುಂಡೇಶ್ವರಿ ದೇವಾಲಯ, ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇವಾಲಯ ಸೇರಿದಂತೆ ಪ್ರಮುಖ ದೇವಾಲಯಗಳೆಲ್ಲವೂ ಭಕ್ತರಿಗಾಗಿ ತೆರೆದಿದ್ದು, ಬೆಳಗ್ಗಿನಿಂದಲೇ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ದೇವಾಲಯದಲ್ಲಿ ಸಾಮಾಜಿಕ ಅಂತರ