ಹುಬ್ಬಳ್ಳಿ: ಸರಳ ವಾಸ್ತು ಗುರೂಜಿ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ್ ಗುರೂಜಿಯವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ವಾಸ್ತವ್ಯವಿದ್ದ ಚಂದ್ರಶೇಖರ್ ಗುರೂಜಿ ಬಳಿಗೆ ಭಕ್ತರ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಸುಮಾರು 50 ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾರೆ.ಭಕ್ತರ ಸೋಗಿನಲ್ಲಿ ಬಂದಿದ್ದ ಇಬ್ಬರು ಗುರೂಜಿಯನ್ನು ಹೋಟೆಲ್ ಆವರಣಕ್ಕೆ ಕರೆತಂದಿದ್ದರು. ಬಳಿಕ ಓರ್ವ ಕಾಲಿಗೆ ನಮಸ್ಕಾರ ಮಾಡಿದ್ದು, ಇದೇ ವೇಳೆ ಇನ್ನೋರ್ವ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಇಬ್ಬರೂ