ಬೆಂಗಳೂರಿನ ಜೆ.ಜೆ. ನಗರದಲ್ಲಿ ಇತ್ತೀಚೆಗೆ ನಡೆದ ಚಂದ್ರಶೇಖರ್ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕು. ಸತ್ಯವನ್ನು ಬಯಲಿಗೆಳೆದು, ಹಂತಕರನ್ನು ಶಿಕ್ಷೆಗೆ ಒಳಪಡಿಸಬೇಕು ಎಂಬ ಉದ್ದೇಶದಿಂದ ಸಿಐಡಿ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸಿಐಡಿ ನಮ್ಮದೇ