ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯಾದ್ಯಂತ ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. ಇದೀಗ ಶನಿವಾರ ಹಾಗೂ ಭಾನುವಾರ ರಾಜಧಾನಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ರೋಡ್ ಶೋನಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಮೋದಿ ರೋಡ್ ಶೋ ನಡೆಯಲಿರುವ ದಿನ ಪ್ರಮುಖ ರಸ್ತೆಗಳನ್ನು ಬಂದ್ ಮಾಡುವುದಾಗಿ ಪೊಲೀಸರು ಸೂಚನೆ ನೀಡಿದ್ದಾರೆ.ಶನಿವಾರ ಬೆಳಗ್ಗೆ 10 ಗಂಟೆಯಿಂದ 12:30 ರವರೆಗೆ ರೋಡ್ ಶೋ