ಸ್ವಾತಂತ್ರ್ಯ ದಿನಾಚರಣೆಯ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇತ್ತೀಚೆಗೆ ನಡೆದ ‘ಮನ್ ಕಿ ಬಾತ್’ ಮಾಸಿಕ ರೇಡಿಯೊ ಕಾರ್ಯಕ್ರಮದಲ್ಲಿಯೂ ಪ್ರಧಾನಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದ್ದರು. ‘ಸಾಮಾಜಿಕ ಮಾಧ್ಯಮಗಳಲ್ಲಿಯೂ ದೇಶದ ಹಿರಿಮೆ ಹೆಚ್ಚಿಸುವಂಥ ಪೋಸ್ಟ್ ಹಂಚಿಕೊಳ್ಳಿ’ ಎಂದು ಸಲಹೆ ಮಾಡಿದ್ದರು..ಇದೀಗ ಸ್ವತಃ ನರೇಂದ್ರ ಮೋದಿ ಅವರೇ ತಮ್ಮ ಟ್ವಿಟರ್ ಮತ್ತು ಫೇಸ್ಬುಕ್ ಅಕೌಂಟ್ಗಳಲ್ಲಿ ಪ್ರೊಫೈಲ್