ಆನ್ ಲೈನ್ನಲ್ಲಿ ಮೋಸ ಹೋದ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ. ನವೆಂಬರ್ 9 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಆರತಿ ಕನಾಟೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ. ಮೃತ ಆರತಿ ಅವರು ಆನ್ ಲೈನ್ನಲ್ಲಿ ಇನ್ವೆಸ್ಟ್ ಮಾಡಿ 2.5 ಲಕ್ಷ ರೂ. ಕಳೆದುಕೊಂಡಿದ್ದರು. ಸಾಲ ಮಾಡಿಕೊಂಡು ಆನ್ ಲೈನ್ನಲ್ಲಿ ಇನ್ವೆಸ್ಟ್ ಮಾಡಿದ್ದರು