ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ಮಾಣ ಮಾಡಲಾಗಿದ್ದ ಹೆಲಿಪ್ಯಾಡ್ನ ಭದ್ರತಾ ಸಿಬ್ಬಂದಿಯೊಂದಿಗೆ ಕರ್ನಾಟಕ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ ಅವರು ವಾಗ್ವಾದ ನಡೆಸಿರುವ ಆರೋಪ ಕೇಳಿಬಂದಿದೆ. ಗುರುಮಿಠಕಲ್ನ ವ್ಯಾಪ್ತಿಯಲ್ಲಿನ ಹೆಲಿಪ್ಯಾಡ್ನಲ್ಲಿ ಈ ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿ ಮೇಲೆ ಬಾಬುರಾವ ಚಿಂಚನಸೂರ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಲಿಪ್ಯಾಡ್ ಹತ್ತಿರ ಜನರು ಹೋಗದಂತೆ ಸಿಬ್ಬಂದಿ ತಡೆದ ಕಾರಣಕ್ಕೆ ಚಿಂಚನಸೂರ ಅವರ ಅಸಮಾಧಾನಗೊಂಡು ಪೊಲೀಸರೊಂದಿಗೆ ಮಾತಿನ ಚಕಮಕಿ