ಹಾಸನ : ನಟ ವಿಷ್ಣುವರ್ಧನ ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ನಟ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ವಿರುದ್ಧ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ನಟ ಅನಿರುದ್ಧ್ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸ್ಮಾರಕ ನಿರ್ಮಾಣ ಮಾಡಲಿ ಎಂದು ಹೇಳಿರುವ ಕಾರಣ ಕೋಪಗೊಂಡ ಸಿಎಂ, ಪದ ಬಳಕೆ ಮಾಡುವಾಗ ಪದಗಳ ಗಾಂಭೀರ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕಲಾವಿದರು ಮಾಡಿದ ಕೆಲಸಕ್ಕೆ ಸರ್ಕಾರ ಗೌರವ ಕೊಟ್ಟಿದ್ದೇವೆ ಎಂದು ಕಿಡಿಕಾರಿದ್ದಾರೆ. ವಿಷ್ಣುವರ್ಧನ್ ಅವರು ನಿಧನರಾದಾಗ ನಾನು ಸಿಎಂ