ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುತ್ತದೆ. ಆದರೆ, ಮುಖ್ಯಮಂತ್ರಿಯ ಆಯ್ಕೆಯನ್ನು ಹೈಕಮಾಂಡ್ ಹಾಗೂ ಶಾಸಕಾಂಗ ಸಭೆ ಮಾಡಲಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯನ್ನು ಚುನಾವಣೆಗಿಂತ ಮುಂಚೆ ಘೋಷಣೆ ಮಾಡಲ್ಲ. ಚುನಾವಣೆ ಮುಗಿದ ನಂತರ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಯಾವುದೇ ಅಸಮಾಧಾನವಿಲ್ಲ. ಅವರಾಗಿಯೇ ಕೇಳಿಕೊಂಡಿರುವುದರಿಂದ ಜಿಲ್ಲೆಯ ಉಸ್ತುವಾರಿ ಬದಲಿಸಲಾಗಿದೆ