ಭೀಕರ ಬರದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ನವದೆಹಲಿಯಲ್ಲಿ ಶನಿವಾರ ಕರೆದಿದ್ದಾರೆ. ಒನ್ ಟು ಒನ್ ಸಭೆ ಇದಾಗಿದ್ದು ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಪ್ರತ್ಯೇಕವಾಗಿ ಭೇಟಿಯಾಗಲಿರುವ ಮೋದಿ ಕೃಷಿ– ಕುಡಿಯುವ ನೀರಿನ ಸಮಸ್ಯೆ, ಮೇವಿನ ಅಭಾವ ಕುರಿತು ಸಮಗ್ರ ಮಾಹಿತಿ ಪಡೆಯಲಿದ್ದಾರೆಂದು ಮೂಲಗಳು ತಿಳಿಸಿವೆ. ಪ್ರಧಾನಿ ಮಂತ್ರಿಗಳ ಜೊತೆಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು