ಎಸ್ಸೆಸ್ಸೆಲ್ಸಿ ಈ ಬಾರಿಯ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯುವ ಮೂಲಕ ಮತ್ತೊಂದು ಮೈಲಿಗಲ್ಲಿಗೆ ಹೆಸರಾಗಿದೆ.ಕಳೆದ ವರ್ಷ ಶೇ. 79.69 ರಷ್ಟು ಫಲಿತಾಂಶ ಪಡೆದು 20 ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಎಲ್ಲ ಜಿಲ್ಲೆಗಳನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.ಈ ಬಾರಿ 285 ಪ್ರೌಢಶಾಲೆಗಳ 17303 ವಿದ್ಯಾರ್ಥಿಗಳು 64 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದರು.ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು