ಮಡಿಕೇರಿ : ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.ಮಡಿಕೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 106 ಅನುದಾನಿತ ಅರೇಬಿಕ್ ಶಾಲೆಗಳು ಇವೆ. 80 ಅನುದಾನ ರಹಿತ ಶಾಲೆಗಳಿವೆ. ಇಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದ ಅನುಸಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ, ಈ ಕುರಿತು