ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಮಕ್ಕಳು ಬರಿಹೊಟ್ಟೆಯಲ್ಲಿ ರಾತ್ರಿ ಮಲಗುತ್ತಿದ್ದಾರೆ ಎಂದು ಹೇಳಿರುವ ವಿಶ್ವಸಂಸ್ಥೆಯು ಮುಂಬರುವ ದಿನಗಳಲ್ಲಿ ದಕ್ಷಿಣ ಏಷ್ಯಾದ ಬೇರೆ ರಾಷ್ಟ್ರಗಳಲ್ಲೂ ಸಹ ಇದೇ ಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದೆ. ರಫ್ತುಗಳನ್ನು ಖರೀದಿಸಲು ತೀವ್ರ ಸ್ವರೂಪದ ವಿದೇಶಿ ವಿನಿಮಯದ ಕೊರತೆಯನ್ನು ಶ್ರೀಲಂಕಾ ಸರ್ಕಾರ ಎದುರಿಸುತ್ತಿರುವುದರಿಂದ ಅಹಾರ ಸರಬರಾಜು, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಅಭಾವ ಉಂಟಾಗಿದೆ. ದ್ವೀಪರಾಷ್ಟ್ರದಲ್ಲಿ ಆಹಾರ ಪದಾರ್ಥಗಳಾದ ಅಕ್ಕಿ, ಬೇಳೆ, ಖಾದ್ಯ ತೈಲ ಮತ್ತು