ಬೆಂಗಳೂರು : ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಿದರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ.ಮಣ್ಣಿನ ಮಕ್ಕಳು ಸ್ವತಃ ಶ್ರಮಜೀವಿಗಳು, ಉದ್ಯಮಶೀಲತೆಯ ಸ್ಫೂರ್ತಿ ಹೊಂದಿರುವವರು ಎಂದು ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ಹೇಳಿದರು.ಪ್ರಾದೇಶಿಕ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ರಚಿಸಲಾದ ವೇದಿಕೆ ಫರ್ಸ್ಟ್ ಸರ್ಕಲ್ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಬಿಸಿನೆಸ್ ನೆಟ್ವರ್ಕಿಂಗ್ ಎಕ್ಸ್ಪೋ ಹಾಗೂ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಕರ್ನಾಟಕದ ಬೆಂಗಳೂರು ಇಡೀ ವಿಶ್ವಕ್ಕೆ ಆವಿಷ್ಕಾರದ ನಾಡು ಎನಿಸಿದೆ.