ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ನಡೆಯುತ್ತಿರುವ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ದೇಶಗಳ ನಾಯಕರು ಭಾಗಿಯಾಗಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಆಫ್ರಿಕಾದ ಉಪಾಧ್ಯಕ್ಷರನ್ನು ಭೇಟಿ ಮಾಡಲು ಅತಿಥಿ ಗೃಹಕ್ಕೆ ಬಂದಿದ್ದು, ಈ ಸಂದರ್ಭದಲ್ಲಿ ಚೀನಾ ಅಧ್ಯಕ್ಷರ ಜತೆಗೆ ಬಂದಿದ್ದ ಸಹಾಯಕರೊಬ್ಬರನ್ನು ಹಾಲ್ ಪ್ರವೇಶಿಸದಂತೆ ಭದ್ರತಾ ಅಧಿಕಾರಿಗಳು ತಡೆದಿದ್ದಾರೆ.