ಬೆಂಗಳೂರು : ಜೀವನದಲ್ಲಿ ಜಿಗುಪ್ಸೆಗೊಂಡು ಸಾಫ್ಟ್ವೇರ್ ಮಹಿಳಾ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವೀರಣ್ಣಪಾಳ್ಯದ ನಿವಾಸಿ ಸಂಗೀತಾ (29) ಮೃತ ಯುವತಿ. ಮೃತಳ ಪತಿ ವಿನಯ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿ ಗುರುವಾರ ಸಂಜೆ ದಂಪತಿ ಮಧ್ಯೆ ಜಗಳವಾಗಿದೆ. ಆಗ ಬೇಸರಗೊಂಡ ಸಂಗೀತಾ, ತನ್ನ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಲ ಹೊತ್ತಿನ ಬಳಿಕ ಆಕೆಯ ಕೋಣೆಗೆ ಪತಿ ತೆರಳಿದಾಗ ಘಟನೆ