ಪಿಎಸ್ಐ ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು. ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್, ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ. ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ