ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಸರ್ಕಲ್ ಇನ್ಸ್ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರದ ಮಾಲೂರು ಪೊಲೀಸ್ ಠಾಣೆಯಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ಕಳೆದ ಒಂದುವರೆ ವರ್ಷಗಳಿಂದ ಕೋಲಾರದ ಮಾಲೂರು ಪಟ್ಟಣದ ಠಾಣೆಯಲ್ಲಿ ಸರ್ಕಲ್ ಇನ್ಸಪೆಕ್ಟರ್ ಆಗಿದ್ದರು. ಸ್ಥಳಕ್ಕೆ ಭೇಟಿ ನೀಡಿರುವ ಎಸ್ಪಿ ದಿವ್ಯಾ ಗೋಪಿನಾಥ್ ಪರಿಶೀಲನೆ ನಡೆಸುತ್ತಿದ್ದಾರೆ. ಸೋಮವಾರ- ಮಂಗಳವಾರದ ನಡುವಿನ ರಾತ್ರಿ 1.30 ರ ಸುಮಾರಿಗೆ ಕಚೇರಿಗೆ ಬಂದಿದ್ದ ರಾಘವೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ.