ಬೆಂಗಳೂರು(ಆ.14): ರಾಜ್ಯದಲ್ಲಿ ಆಗಸ್ಟ್ 23ರಿಂದ 9-12ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭಗೊಂಡರೂ ಹಾಜರಾತಿ ಕಡ್ಡಾಯ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. 9ರಿಂದ 12ನೇ ತರಗತಿ ಆರಂಭದಿಂದ ಆಗುವ ಪರಿಣಾಮಗಳನ್ನು ಆ.23ರಿಂದ 30ರವರೆಗೆ ನೋಡಿಕೊಂಡು ಬಳಿಕ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಅವರೊಂದಿಗೂ ಚರ್ಚಿಸಿ ಸೆ.1ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭದ ಬಗ್ಗೆ