ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿ, ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ನ್ಯಾಯ ಸಿಗಬಹುದೆಂಬ ಭರವಸೆಯಿಂದ ಕಾಯುತ್ತಿದ್ದ ಮೃತನ ಕುಟುಂಬದ ನೋವನ್ನು ಇನ್ನಷ್ಟು ಹೆಚ್ಚಿಸಿದೆ. ಇದೇ ಕಾರಣಕ್ಕಾಗಿ ನಾನು ನ್ಯಾಯಾಂಗ