ನಡೆದಾಡುವ ದೇವರು ಖ್ಯಾತಿಯ ಡಾ. ಶಿವಕುಮಾರ ಸ್ವಾಮೀಜಿಯವರ ಹೆಸರು ಅಮರವಾಗಿ ಉಳಿಸಲು ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಯೋಜನೆಗಳ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದ್ದು, ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದರು. ತುಮಕೂರು ಸಿದ್ದಗಂಗೆಯ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆದ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ