ಗ್ರಾಮೀಣ ಪ್ರದೇಶಗಳಿಗೆ ತೆರಳಿ ಶೌಚಾಲಯ ನಿರ್ಮಾಣಕ್ಕಾಗಿ ಗುದ್ದಲಿ ಹಿಡಿದು ಶೌಚಗುಂಡಿ ತೆಗೆದಿದ್ದ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವತಿ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಆಕ್ಟೋಬರ್ 2 ರೊಳಗೆ ಜಿಲ್ಲೆಯನ್ನು ಶೌಚಮುಕ್ತ ಜಿಲ್ಲೆಯನ್ನಾಗಿಸಬೇಕು ಎನ್ನುವ ಗುರಿಯೊಂದಿಗೆ ಸಿಇಒ ಅಶ್ವತಿ ತಮ್ಮ ಅಧಿಕಾರಿಗಳೊಂದಿಗೆ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರನ್ನು ಹುರಿದುಂಬಿಸುತ್ತಿದ್ದಾರೆ. ಸಮಾಜದಲ್ಲಿ ಬದಲಾವಣೆ ಬರಬೇಕು. ಅದಕ್ಕೆ ಅಶ್ವತಿಯಂತಹ ಅಧಿಕಾರಿಗಳು ಸಮಾಜದಲ್ಲಿ ಇರಬೇಕು. ಅವರ ಕಾರ್ಯ ಇತರರಿಗೆ ಸ್ಪೂರ್ತಿಯಾಗಲಿದೆ ಎಂದು