ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ತಾರತಮ್ಯ ನಿವಾರಣೆಗಾಗಿ ಹಾಗೂ ಬಲವರ್ಧನೆಗಾಗಿ ರಾಘವೇಂದ್ರ ಔರಾದಕರ ಸಮಿತಿ ನೀಡಿರುವ ವರದಿಯ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಕಲಬುರಗಿ ನಗರದ ಹಳೆಯ ಐಜಿಪಿ ಕಚೇರಿಯಲ್ಲಿ ಪ್ರಾರಂಭಿಸಲಾದ ಪೊಲೀಸ್ ಆಯುಕ್ತಾಲಯ ಕಚೇರಿ ಉದ್ಘಾಟಿಸಿದ ನಂತರ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಈಗಾಗಲೇ ಔರಾದಕರ ಸಮಿತಿ ವರದಿಯ ಅನುಷ್ಠಾನಕ್ಕೆ ಮೂರು ಸಭೆಗಳನ್ನು ಕೈಗೊಳ್ಳಲಾಗಿದೆ. ಪೊಲೀಸ್