ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ..ವಿಧಾನಸೌಧದ ಈಶಾನ್ಯ ಭಾಗದ ರೋಸ್ ಗಾರ್ಡನ್ ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನವೆಂಬರ್ 1 ರಂದು ಕೆಂಪೇಗೌಡ ಪ್ರತಿಮೆ ಮತ್ತು