ಸಂಪೂರ್ಣವಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ಆಗಸ್ಟ್ 12ರಂದು ಕೃಷ್ಣೆಗೆ ಬಾಗಿನ ಅರ್ಪಣೆ ನಡೆಯಲಿದೆ. ಇದಕ್ಕಾಗಿ ಕೆ.ಬಿ.ಜೆ.ಎನ್.ಎಲ್. ನಿಂದ ಭರದ ಸಿದ್ಧತೆ ನಡೆದಿದೆ.ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿನ ಲಾಲ್ಬಹದ್ದೂರ್ ಶಾಸ್ತ್ರಿ ಸಾಗರ ಜಲಾಶಯಕ್ಕೆ ಶ್ರಾವಣದ ಮೊದಲ ದಿನವಾದ ಆಗಸ್ಟ್ 12ರಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಾಗಿನ ಅರ್ಪಿಸಲಿದ್ದಾರೆ. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಚಿವರಾದ ಶಿವಾನಂದ ಪಾಟೀಲ, ಎಂ.ಸಿ. ಮನಗೂಳಿ ಪಾಲ್ಗೊಳ್ಳಲಿದ್ದಾರೆ. ಬಾಗಿನ ಅರ್ಪಿಸುವ