ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಶಾಲೆ ಆರಂಭದ ಕುರಿತಂತೆ ಈಗಾಗಲೇ ಮಾರ್ಗಸೂಚಿ ನೀಡಲಾಗಿದ್ದು, ಶಾಲೆ ಆರಂಭದ ದಿನ ಬೆಂಗಳೂರಿನ ಕೆಲವು ಶಾಲೆಗಳಿಗೆ ಭೇಟಿ ನೀಡಲಾಗುವುದು. ನಾನು, ಶಿಕ್ಷಣ ಸಚಿವರು ಶಾಲೆಗಳಿಗೆ ಭೇಟಿ ನೀಡುತ್ತೇವೆ. ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ. ಪೋಷಕರ ಸಮ್ಮತಿಯನ್ನು ಪಡೆದುಕೊಂಡು ಮಕ್ಕಳು ಶಾಲೆಗೆ