ನಮ್ಮದು ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ. ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಅವರು ಇಂದು ಉಡುಪಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಕಾನೂನಿನ ಪ್ರಕಾರ ನಡೆಯುವುದು ನಮ್ಮ ಕೆಲಸ ಮಂಗಳೂರಿನಲ್ಲಿ ಲವ್ ಜಿಹಾದ್ ಬಗ್ಗೆ ಹಿಂದೂ ಟಾಸ್ಕ್