ಸಿಎಂ ನಡೆ ನುಡಿ ನೋಡಿದ್ರೆ ಅಸಹ್ಯವಾಗುತ್ತದೆ: ಯಡಿಯೂರಪ್ಪ

ಬೆಂಗಳೂರು:| Rajesh patil| Last Modified ಭಾನುವಾರ, 21 ಮೇ 2017 (16:57 IST)
ನೋಡಿದ್ರೆ ರಾಜ್ಯದಲ್ಲಿ ಬರವೇ ಇಲ್ಲ ಅನ್ನುತ್ತಾರೆ. ಅವರು ಹೆಲಿಕಾಪ್ಟರ್ ಬಿಟ್ಟು ನೆಲದ ಮೇಲೆ ಓಡಾಡಲಿ. ಬರ ಇದೆಯೋ ಇಲ್ಲವೋ ಎನ್ನುವುದು ಗೊತ್ತಾಗುತ್ತದೆ. ಇತ್ತೀಚೆಗೆ ಸಿಎಂ ನಡೆ ನುಡಿ ನೋಡಿದ್ರೆ ಅಸಹ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋಲನುಭವಿಸಿದರೆ ಅದಕ್ಕೆ ಉಳಿಗಾಲವೇ ಇಲ್ಲ ಎಂದು ಗುಡುಗಿದ್ದಾರೆ.


ದೇಶದಲ್ಲಿಯೇ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಅಳಿವು ಉಳಿವಿನ ಪ್ರಶ್ನೆಯಾಗಿದೆ ಎಂದು

ತಿಳಿಸಿದ್ದಾರೆ.


ರಾಜ್ಯದಲ್ಲೂ ಬಿಜೆಪಿಯೇ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಪ್ರತಿಯೊಬ್ಬರು ಚುರುಕಿನಿಂದ ಕೆಲಸ ಮಾಡಬೇಕು. ನಮ್ಮ ಒತ್ತಾಯದಿಂದ ಮಹಾರಾಷ್ಟ್ರದ ಕೊಯ್ನಾ ಡ್ಯಾಂನಿಂದ ಎರಡು ಬಾರಿ ಕೃಷ್ಣಾ ನದಿಗೆ ನೀರು ಹರಿಸಲಾಗಿದೆ ಎಂದು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಇದರಲ್ಲಿ ಇನ್ನಷ್ಟು ಓದಿ :