ಬೆಂಗಳೂರು,ಆ.21 : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಆಗುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಮೂರನೇ ಬಾರಿಗೆ ಮತ್ತೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಈ ಬಾರಿಯ ದೆಹಲಿ ಭೇಟಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡುವಂತೆ ಮತ್ತು ರಾಜ್ಯದ ಯೋಜನೆಗಳನ್ನು ಕೇಂದ್ರ ಸಚಿವರೊಂದಿಗೆ ಚರ್ಚಿಸುವ ಉದ್ದೇಶವಿದೆ. ಇದರೊಂದಿಗೆ ಸಂಪುಟ ರಚನೆಯ ಬಳಿಕ ಹಾಗೂ ಖಾತೆ ಹಂಚಿಕೆ ನಂತರ ರಾಜ್ಯದಲ್ಲಾಗುತ್ತಿರುವ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಕೇಂದ್ರ ನಾಯಕರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಕೇಂದ್ರದ