ಬೆಂಗಳೂರು : ‘ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ. ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ.ಬೇಗ ‘ಘರ್ ವಾಪಸಿ’ ಆಗಬಿಡಿ’. ‘ಸಿದ್ದರಾಮಯ್ಯ ದ್ರಾವಿಡರೇ? ಆರ್ಯರೇ?’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಶ್ನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ ಪರಿಯಿದು. ‘ಬೊಮ್ಮಾಯಿವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ