ಬೆಂಗಳೂರು(ಅ. 05): ಐದು ಜಿಲ್ಲೆಗಳ ಕುಡಿಯುವ ನೀರಿನ ಉದ್ದೇಶಕ್ಕೆ ಪ್ರಾರಂಭಿಸಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ವಿರೋಧಿಸುವ ತನ್ನ ಹಠವನ್ನು ತಮಿಳುನಾಡು ಮುಂದುವರಿಸಿದೆ. ಕರ್ನಾಟಕದ ಐಪಿಎಸ್ ಕೆಡರ್ ಆಗಿದ್ದ ಅಣ್ಣಾಮಲೈ ಅವರು ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡಿನಲ್ಲಿ ಸತ್ಯಾಗ್ರಹ ನಡೆಸಿದ್ದಾರೆ. ಸಾವಿರಾರು ಕಾರ್ಯಕರ್ತರು, ಕಾರ್ಮಿಕರನ್ನ ಸೇರಿಸಿಕೊಂಡು ತಮ್ಮ ತವರಿನಲ್ಲಿ ಪ್ರತಿಭಟನೆ ನಡೆಸಿದ್ಧಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಣ್ಣಾಮಲೈ ನಿಲುವನ್ನು ಕರ್ನಾಟಕದ ರಾಜಕೀಯ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಬಲವಾಗಿ ಖಂಡಿಸಿದ್ಧಾರೆ. ಸಿಎಂ ಬಸವರಾಜ