ರಾಜ್ಯದ ಗಡಿ ಭಾಗಕ್ಕೆ ಮಹಾರಾಷ್ಟ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ನಾನು ಡಿ.ಕೆ. ಶಿವಕುಮಾರ್ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಗಡಿ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ 54 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿರುವ ವಿಚಾರವಾಗಿ