ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ, ಅಂದ್ರೆ ಮಂಗಳವಾರ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಈ ವೇಳೆ ಸಂಪುಟ ವಿಸ್ತರಣೆ ಮತ್ತು ರಾಜಕೀಯ ವಿದ್ಯಮಾನಗಳ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ನಾಲ್ಕರಿಂದ ಐದು ತಿಂಗಳು ಮಾತ್ರ ಬಾಕಿ ಉಳಿದಿದೆ. ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂಬ ಒತ್ತಡ ಕೇಳಿ ಬರುತ್ತಿರುವ