ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೆಹಲಿಗೆ ತೆರಳಲಿದ್ದು,ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ನೆನೆಗುದಿಗೆ ಬಿದ್ದಿರುವ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ. ಶುಕ್ರವಾರ ರಾಷ್ಟ್ರಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬೊಮ್ಮಾಯಿ ಅವರನ್ನು ದೆಹಲಿಗೆ ಆಹ್ವಾನಿಸಲಾಗಿದೆ. ಇದೇ ವೇಳೆ ಅವಕಾಶ ಸಿಕ್ಕರೆ ಬೊಮ್ಮಾಯಿ ಅವರು ಪಕ್ಷದ ವರಿಷ್ಠರನ್ನು ಕಂಡು ಸಂಪುಟ