ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಮುಖಂಡರು ಬುಧವಾರ ಬೆಳಿಗ್ಗೆ ಬೆಂಗಳೂರಿನ ಮಳೆ ಪೀಡಿತ ಪ್ರದೇಶಗಳಿಗೆ ಕಾಟಾಚಾರದ ಭೇಟಿ ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಭಾರೀ ಮಳೆ ಸುರಿದು ಹಲವು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರು.