ಬೆಂಗಳೂರು: ನೂತನ ಸಚಿವರಿಗೆ ಶೀಘ್ರದಲ್ಲೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರಾದರೂ ಈ ಪ್ರಕ್ರಿಯೆ ಅಷ್ಟು ಸಲೀಸಾಗಿ ನಡೆಯುವಂತೆ ಕಾಣುತ್ತಿಲ್ಲ. ಪ್ರಮುಖ ಖಾತೆಗಾಗಿ ಸಂಪುಟದ ಸದಸ್ಯರು ಒತ್ತಡ ತರುತ್ತಿರುವುದೇ ಇದಕ್ಕೆ ಕಾರಣವಾಗಿದೆ. ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾದವರಲ್ಲಿ 6 ಮಂದಿ ಮಾತ್ರ ಹೊಸಬರು. ಉಳಿದವರು ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲೂಇದ್ದರು. ಹಾಗಾಗಿ ಹಳಬರಿಗೆ ಈ ಮೊದಲು ಅವರು ನಿರ್ವಹಿಸುತ್ತಿದ್ದ ಖಾತೆಯನ್ನೇ ನೀಡಲಾಗುತ್ತದೆ ಎಂಬ ವರ್ತಮಾನವಿತ್ತು. ಅದರಲ್ಲೂ ಮಿತ್ರಮಂಡಳಿಯ ಕೋಟಾದವರಿಗೆ