ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಗೌರವ ನೀಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಪ್ರತಿಪಾದಿಸಿದ್ದಾರೆ. ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕಂದಾಯ ಸಚಿವ ಅಶೋಕ್ ಅವರಿಂದ 2021ರ ಸಾಲಿನ ಮೈಸೂರು ದಸರಾ ಉದ್ಘಾಟನೆಯ ಆಮಂತ್ರಣ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.