ಬೆಂಗಳೂರು, ಸೆ.30 : ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಆರ್ಎಸ್ಎಸ್ ಕಚೇರಿಗೆ ತೆರಳಿ ನಾಯಕರನ್ನು ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಉಪ ಚುನಾವಣೆ ಮತ್ತಿತರ ವಿಷಯಗಳ ಬಗ್ಗೆ ಹಿರಿಯ ಆರ್ಎಸ್ಎಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ನಾಯಕರು ಕೆಲವು ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಹಾನಗಲ್