ಬೆಂಗಳೂರು : ಬಹುಮತವಿದ್ದರೂ ಕಾಂಗ್ರೆಸ್, ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಬಿಜೆಪಿಗೆ ಅಧಿಕಾರ ಸಿಗಬಾರದೆಂದು ಮೈತ್ರಿ ಸರ್ಕಾರ ರಚಿಸಿದ್ರು ಎಂದು ವಿಪಕ್ಷಗಳ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಆಡಳಿತದ ಬಗ್ಗೆ ನಾನು ಹೇಳಬೇಕಿಲ್ಲ. ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿದ್ದೇ, ಕಿರುಕುಳ ಅನುಭವಿಸಿದ್ದೆ. ಹೀಗೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್.ಡಿಕೆ ಅಧಿಕಾರ ನಡೆಸಲು ಬಿಡದೆ ತೊಂದ್ರೆ ಕೊಟ್ರು. ಇದನ್ನು