ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು..ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ 8