ಬರಿ ರಾಯಣ್ಣ, ಬ್ರಿಗೇಡ್ ಅಂತ ಹೋದರೆ ಏನೂ ದೊರೆಯುವುದಿಲ್ಲ ಎಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಬಗ್ಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಆಯೋಜಿಸಲಾದ ಕುರುಬರ ಸಮಾವೇಶದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣ ಹೆಸರಲ್ಲಿ ಅನುದಾನ ನೀಡಿದ್ದೇನೆ, ಅವರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿಸಿದರು. ಕೆಲವರು ಸ್ವಾರ್ಥಕ್ಕಾಗಿ ಬ್ರಿಗೇಡ್ಗಳನ್ನು ಹುಟ್ಟುಹಾಕುತ್ತಾರೆ. ಅದನ್ನು ಕೊನೆಯವರೆಗೂ ಉಳಿಸಿಕೊಂಡು ಹೋಗುವ ಛಲ ಇರುವುದಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿರುದ್ಧ