ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾವಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಹೈಕಮಾಂಡ್ ಅನುಮತಿ ನೀಡಿದೆ. ಪಂಚಮಸಾಲಿ ಮತಗಳು ಅಧಿಕವಾಗಿದ್ದರಿಂದ ವಿನಯ್ ಕುಲಕರ್ಣಿ ಮೂಲಕ ಸಿಎಂ ಬೊಮ್ಮಾಯಿ ಹಣಿಯಲು ಕಾಂಗ್ರೆಸ್ ಮುಂದಾಗಿದೆ. ಇನ್ನು ಈ ಬಗ್ಗೆ ಸ್ವತಃ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನನ್ನ ನಿರ್ಧಾರವಲ್ಲ. ಸಿಎಂ ವಿರುದ್ಧ ಸ್ಪರ್ಧೆ ಮಾಡಬೇಕೆಂಬುದು ಹೈಕಮಾಂಡ್