ಕುಶಾಲನಗರ ಸಮೀಪದ ಹಾರಂಗಿ ಅಣೆಕಟ್ಟೆಗೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗಮಿಸಿ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ನಾಡಿನ ಸಮೃದ್ಧಿಗಾಗಿ ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಿದರು. ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ರೆವಣ್ಣನವರು ಸಿಎಂ ಗೆ ಸಾಥ್ ನೀಡಿದರು.ಕೊಡಗಿನಲ್ಲಿ ವರ್ಷಧಾರೆಗೆ ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಪ್ರಮುಖ ಜಲಾಶಯ ಹಾರಂಗಿ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಸಮೇತ ಜಲಾಶಯಕ್ಕೆ ಆಗಮಿಸಿ