ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಲಿದ್ದು, ಬಿಜೆಪಿ ವರಿಷ್ಠರ ಬಳಿ ಸಂಪುಟ ವಿಸ್ತರಣೆಯ ಬಗ್ಗೆ ಪ್ರಸ್ತಾಪ ನಡೆಸಲಿದ್ದಾರೆ ಎನ್ನಲಾಗಿದೆ. ಇಂದು ಹೈ ಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ, ಸಂಪುಟದಲ್ಲಿ ಉಳಿದಿರುವ ನಾಲ್ಕು ಸ್ಥಾನಗಳ ಭರ್ತಿಗೆ ವರಿಷ್ಠರಿಂದ ಅನುಮತಿ ಕೇಳಲಿದ್ದಾರೆ. ಇನ್ನು ಬಿಜೆಪಿ ಹೈಕಮಾಂಡ್ ಕೂಡ ರಾಜ್ಯ ಸಂಪುಟ ವಿಸ್ತರಣೆಗೆ ಅಸ್ತು ಎನ್ನುವ ಸಾಧ್ಯತೆಯಿದೆ. ಇನ್ನು ಉಳಿದ ನಾಲ್ಕು ಸ್ಥಾನಕ್ಕಾಗಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು