ಸಿಎಂ ಕ್ಷೇತ್ರ ಭಯೋತ್ಪಾದಕರ ಅಡಗುತಾಣವಾಗ್ತಿದೆ. ಹೀಗಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಬಂಧಿತನಾದ ಭಯೋತ್ಪಾದಕ ಮುನೀರ್ ಬಂಧನದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಬಿಜೆಪಿ ಕಾರ್ಯಕರ್ತರು ರಾಮನಗರದಲ್ಲಿ ಪ್ರತಿಭಟನೆ ನಡೆಸಿದ್ರು. ಸಿ.ಎಂ. ಕುಮಾರಸ್ವಾಮಿ ಅವರ ತವರು ಜಿಲ್ಲೆ ರಾಮನಗರ ಇತ್ತೀಚಿನ ದಿನಗಳಲ್ಲಿ ಭಯೋತ್ಪಾಕರ ಅಡಗು ತಾಣವಾಗ್ತಿದೆ. ರಾಜ್ಯದಲ್ಲಿನ ಸಮಿಶ್ರ ಸರ್ಕಾರ ಭಯೋತ್ಪಾದಕರಿಗೆ ಆಶ್ರಯವನ್ನು ನೀಡ್ತಿದೆ. ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರು