ಶಿವಮೊಗ್ಗದಲ್ಲಿ ನಡೆದ ದುರಂತದ ಬಗ್ಗೆ ಸಿಎಂ, ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು| pavithra| Last Updated: ಶುಕ್ರವಾರ, 22 ಜನವರಿ 2021 (10:40 IST)
ಬೆಂಗಳೂರು : ಶಿವಮೊಗ್ಗ ನಡೆದ ಭಾರೀ ಸ್ಫೋಟ ದುರಂತದ ಬಗ್ಗೆ ಸಿಎಂ ಬಿಎಸ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ವೈ, ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರೆಲ್ಲರೂ ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಹಾಗೇ ಈ ದುರ್ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಈ ಬಗ್ಗೆ ಟ್ವೀಟ್ ಮಾಡಿ, ಶಿವಮೊಗ್ಗದಲ್ಲಿ ನಡೆದ ದುರಂತ ತುಂಬಾ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುರ್ಘಟನೆಯ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಬಡ ಕಾರ್ಮಿಕರ ಜೀವ ಹರಣಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಅವಘಡ ಮರುಕಳಿಸಬಾರದಂತೆ ಎಚ್ಚರವಹಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :