ಮಾಧ್ಯಮದವರ ಮೇಲೆ ಫುಲ್ ಗರಂ ಆದ ಸಿಎಂ

ಬೆಂಗಳೂರು| pavithra| Last Modified ಗುರುವಾರ, 8 ಏಪ್ರಿಲ್ 2021 (13:58 IST)
ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಬಗ್ಗೆ ಪ್ರಶ್ನಿಇದ್ದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ  ಅವರು ಮಾಧ್ಯಮದವರ ಮೇಲೆ ಫುಲ್ ಗರಂ ಆಗಿದ್ದಾರೆ.

ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಖಾಸಗಿ ಬಸ್ ಗಳ ಸಂಚರಿಸುತ್ತಿದೆ. ಹೀಗಾಗಿ ಖಾಸಗಿ ಬಸ್ ಗಳ ಇನ್ಸುರೆನ್ಸ್, ಫಿಟ್ ನೆಸ್ ಬಗ್ಗೆ ಹಾಗೂ ದುಪ್ಪಟ್ಟು ದರ ಬಗ್ಗೆ,  ಪ್ರಯಾಣಿಕರ ಹಿತದೃಷ್ಟಿಯಿಂದ ಮಾಧ್ಯಮದವರು ಸಿಎಂ ಅವರನ್ನು ಪ್ರಶ್ನಿಸಿದ್ದಾರೆ.

ಇದರಿಂದ ಕೋಪಗೊಂಡ ಸಿಎಂ ಬಿಎಸ್ ವೈ, ನೀವೇನು ಜವಾಬ್ದಾರಿಯನ್ನು ತೆಗೆದುಕೊಳ್ಳುವುದು ಬೇಡ. ನೀವು ಇದರ ಬಗ್ಗೆ ಯಾವುದೇ ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ಹೇಗೆ ನಡೆಸಬೇಕೆಂದು ನಮಗೆ ಗೊತ್ತಿದೆ ಎಂದು ಗರಂ ಆಗಿ ಉತ್ತರಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :