ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಎಚ್ಎಎಲ್ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಬೀಳ್ಕೊಟ್ಟ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಅವರೊಂದಿಗೆ ರಹಸ್ಯ ಸ್ಥಳಕ್ಕೆ ತೆರಳಿದರು. ತಿಂಡಿ ತಿನ್ನುವ ನೆಪದಲ್ಲಿ ಉಭಯ ನಾಯಕರು ಚರ್ಚೆ ನಡೆಸಲು ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭೆ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿರುವುದರಿಂದ, ಸಚಿವ